ಮೈಸೂರು

ಬಿಇಎಂಎಲ್ ಒಕ್ಕಲಿಗರ ಸಂಘದ ರಜತ ಮಹೋತ್ಸವ ‘ಡಿ.24’

ಬಿಇಎಂಎಲ್ ಒಕ್ಕಲಿಗರ ಸಂಘದ ರಜತ ಮಹೋತ್ಸವದಂಗವಾಗಿ ಪ್ರತಿಭಾ ಪುರಸ್ಕಾರ, ನೇತ್ರದಾನ – ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ದೇವರಾಜ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅವರು, ಪತ್ರಕರ್ತರ ಭವನದಲ್ಲಿ ಈ ಬಗ್ಗೆ ಮಾತನಾಡಿ ರಜತ ಮಹೋತ್ಸವ ಡಿ.24ರ ಶನಿವಾರ ಸಂಜೆ 4ಗಂಟೆಗೆ ಕಲಾಮಂದಿರದಲ್ಲಿ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಶಾಖಾಮಠದ ಸೋಮೇಶ್ವರನಾಥ ಸ್ವಾಮಿ ಸಾನಿಧ್ಯ ವಹಿಸುವರು, ಮುಖ್ಯ ಅತಿಥಿಗಳಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಎಂಎನ್‍ಸಿ ಸಂದೇಶ್ ನಾಗರಾಜ್ ಹಾಗೂ ಮಹಾಪೌರ ಎಂ.ಜೆ.ರವಿಕುಮಾರ್ ಭಾಗವಹಿಸುವರು,

ವಿಶೇಷ ಆಹ್ವಾನಿತರಾಗಿ ಲೋಕಸಭಾ ಸದಸ್ಯ ಪ್ರತಾಪ್‍ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಹಾಗೂ ಪಿ.ವಾಸು ಉಪಸ್ಥಿತರಿರುವರು. 25ನೇ ವರ್ಷದ ರಜತ ಮಹೋತ್ಸವದ ವಿಶೇಷ ಸ್ಮರಣ ಸಂಚಿಕೆ “ಕಾವೇರಿ3’ ಅನ್ನು ಬಿಡುಗಡೆಗೊಳಿಸಲಾಗುವುದು.

ಸನ್ಮಾನ : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಾದ ಮಂಡ್ಯದ ಚರ್ಮರೋಗ ತಜ್ಞ ಡಾ.ಶಂಕರೇಗೌಡ, ರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ತಂಡದ ನಾಯಕಿ ಹೆಚ್.ಎಂ.ಬಾಂಧವ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್‍ ಮೈಸೂರು ಜಿಲ್ಲಾ ಉಪಾಧ್ಯಕ್ಷ ಹಾಗೂ ಹವ್ಯಾಸಿ ರಂಗಕರ್ಮಿ ಹೆಚ್.ಎಸ್.ಸುರೇಶ್‍ಬಾಬು ಇವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಗಳಲ್ಲಿ ಹೆಚ್ಚು ಅಂಕಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನ, ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಸುಗಮಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್.ಪಿ.ಜಗದೀಶ್, ವಾಸುಕೂರಗಳ್ಳಿ, ರಮೇಶ್, ಹೆಚ್.ಮಂಜುನಾಥ್ ಹಾಗೂ ರಂಗಸ್ವಾಮಿ ಉಪಸ್ಥಿತರಿದ್ದರು.

Leave a Reply

comments

Related Articles

error: