ಕರ್ನಾಟಕಪ್ರಮುಖ ಸುದ್ದಿ

ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಆ.31ರಂದು ಸಾರ್ವತ್ರಿಕ ರಜೆ

ಬೆಂಗಳೂರು (ಆ.28): ರಾಜ್ಯದಲ್ಲಿ ನಗರ ಆಗಸ್ಟ್ 31ರಂದು ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯಲಿದ್ದು, ಆಯಾ ಮತಕ್ಷೇತ್ರಗಳಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗಸಂಸ್ಥೆಗಳನ್ನು ಒಳಗೊಂಡಂತೆ ಆಗಸ್ಟ್ 31ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ 163 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ವಿಧಾನ ಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ ಎದುರಾಗಿದೆ. 2013 ರಲ್ಲಿ 208 ನಗರ ಸ್ಥಳೀಯ ಸಂಸ್ಥೆ. ಮುನಿಸಿಪಲ್ ಕಾರ್ಪೋರೇಷನ್ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆದಿತ್ತು. (ಎನ್.ಬಿ)

Leave a Reply

comments

Related Articles

error: