ಮೈಸೂರು

ರೋಟರಿ ಸಾಮಾಜಿಕ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ: ಯದುವೀರ್

ರೋಟರಿ ಸಂಸ್ಥೆ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ನೀಡುತ್ತಿರುವ ಕೊಡುಗೆಗಳನ್ನು ಇತರರು ಮಾದರಿಯಾಗಿ ಸ್ವೀಕರಿಸಬೇಕಿದೆ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಮೈಸೂರಿನ ಕೆ.ಆರ್.ಎಸ್ ರಸ್ತೆಯಲ್ಲಿರುವ ರೋಟರಿ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಕೃತಕ ಕಾಲು ಜೋಡಣಾ ಕೇಂದ್ರಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರೋಟರಿ ಸಂಸ್ಥೆಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡುತ್ತಿರುವ ಕೊಡುಗೆಗಳು ಶ್ಲಾಘನೀಯ. ನಿರ್ಲಕ್ಷ್ಯಕ್ಕೆ ಒಳಗಾಗಿರುವ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿದೆ. ಅಷ್ಟೇ ಅಲ್ಲದೇ ವಿಕಲಚೇತನರಿಗೆ ಕೃತಕ ಕಾಲುಗಳನ್ನು ನೀಡುವ ಮೂಲಕ ಸಾಮಾಜಿಕ ಕಾರ್ಯ ನಡೆಸುತ್ತಿದ್ದು, ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು.

ನೂತನ ಶಾಲಾ ಕಟ್ಟಡವನ್ನು ಇದೇ ಸಂದರ್ಭ ಯದುವೀರ್ ನೆರವೇರಿಸಿದರು. ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್, ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಡಾ. ಆರ್.ಎಸ್. ನಾಗರಾಜ್, ರೋಟರಿ ಮೈಸೂರು ಅಧ್ಯಕ್ಷ ಎಂ.ಆರ್. ರಾಜಾರಾಂ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: