ಕ್ರೀಡೆಮೈಸೂರು

ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿ : ಚಾಂಪಿಯನ್ ಆಗಿ ಹೊರ ಹೊಮ್ಮಿದ ವಿದ್ಯಾಶ್ರಮ ಕಾಲೇಜು ತಂಡ

ಮೈಸೂರು,ಆ.30:- ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಮತ್ತು ಪತ್ರಿಕೋದ್ಯಮಿ ರಾಜಶೇಖರ್ ಕೋಟಿ ಸ್ಮರಣಾರ್ಥ ಆಯೋಜಿಸಿದ್ದ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿಯ ಪುರುಷರ ಕಾಲೇಜು ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾಶ್ರಮ ಕಾಲೇಜು ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

ರಾಷ್ಟ್ರೀಯ ಕ್ರೀಡಾ ದಿನಾಚರಣೆ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕ್ರೀಡಾ ಪಂದ್ಯಾವಳಿ ಆಯೋಜಿಸಲಾಗಿತ್ತು. ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ ಎಸ್ ಜೆಸಿ ಕಾಲೇಜು ವಿರುದ್ಧ 3-1ಗೋಲುಗಳಿಂದ ಗೆಲುವು ಸಾಧಿಸಿತು. ವಿದ್ಯಾಶ್ರಮ ತಂಡದ ವರುಣ್ ಗಣಪತಿ (29,37ನಿಮಿಷ)ಎರಡು ಗೋಲುಗಳಿಸಿ ತಂಡದ ಗೆಲುವಿಗೆ ಕಾರಣರಾದರು. ಲೇಹರ್ ತಿಮ್ಮಯ್ಯ(44ನಿ)ಗೋಲು ಬಾರಿಸಿ ತಂಡದ ಗೆಲುವಿನ ಅಂತರ ಹೆಚ್ಚಿಸಿದರು. ಎಸ್ ಜೆಸಿ ಪರ ಸುರೇಶ್(50ನಿ)ಗೋಲು ದಾಖಲಿಸಿದರು. ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಸೇಂಟ್ ಜೋಸೆಫ್ ಕಾಲೇಜು ತಂಡ 4-0ಗೋಲುಗಳಿಂದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜನ್ನು ಮಣಿಸಿತು. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ರಾಮಕೃಷ್ಣ ವಿದ್ಯಾಲಯ ತಂಡ ಪ್ರಥಮ ಸ್ಥಾನ ಪಡೆದಿದ್ದು, ಫೈನಲ್ ಪಂದ್ಯದಲ್ಲಿ ಕೇಂದ್ರೀಯ ವಿದ್ಯಾಲಯದ ವಿರುದ್ಧ 4-0ಗೋಲುಗಳಿಂದ ಜಯ ಪಡೆಯಿತು. ಪ್ರೌಢಶಾಲಾ ವಿಭಾಗದ ಬಾಲಕಿಯರ ಫೈನಲ್ ಪಂದ್ಯದಲ್ಲಿ ಡಿಎಂಎಸ್ ತಂಡ 2-0ಗೋಲುಗಳಿಂದ ಜೆಎಸ್ ಎಸ್ ವಿರುದ್ಧ ಜಯ ಸಾಧಿಸಿತು.

ಶಾಸಕ ಎಸ್.ಎ ರಾಮದಾಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ ಹಾಗೂ ವಿಜೇತ ತಂಡಕ್ಕೆ ಟ್ರೋಫಿ ಮತ್ತು ಬಹುಮಾನ ವಿತರಿಸಿದರು. ಈ ಸಂದರ್ಭ ಆಂದೋಲನ ಪತ್ರಿಕೆಯ ಸಂಪಾದಕ ರವಿಕೋಟಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನಿರ್ದೇಶಕ ಕೆ.ಸುರೇಶ್, ರಾಷ್ಟ್ರೀಯ ಕ್ರೀಡಾ ದಿನಾಚರಣಾ ಸಮಿತಿ ಅಧ್ಯಕ್ಷ ಎನ್.ಕೃಷ್ಣೇಗೌಡ, ಉಪಾಧ್ಯಕ್ಷ ಎನ್.ಆರಾಧ್ಯ, ಗೌ.ಕಾ.ಡಾ.ಪುಲಕೇಶ್, ವಿದ್ಯಾಶ್ರಮ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ.ರಾಕೇಶ್ ರಾಜೇ ಅರಸ್, ಕಾಲೇಜು ಪ್ರಾಂಶುಪಾಲೆ ಖುಷಿ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: