ಪ್ರಮುಖ ಸುದ್ದಿ

ದೇಶದ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಲು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅರ್ಹರು : ಬಸವರಾಜರಾಯರೆಡ್ಡಿ

ರಾಜ್ಯ(ಬೆಂಗಳೂರು)ಆ.30:- ದೇಶದ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಲು ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅರ್ಹರು.ಅವರಿಗೆ ಆ ಸಾಮರ್ಥ್ಯ ಇದೆ ಎಂದು ರಾಜ್ಯದ ಮಾಜಿ ಸಚಿವ ಬಸವರಾಜರಾಯರೆಡ್ಡಿ ಹೇಳಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ತಾವು ಪ್ರಧಾನಿ ಅಭ್ಯರ್ಥಿ ಅಲ್ಲ ಎಂದು ಈಗಾಗಲೇ ಹೇಳಿರುವುದರಿಂದ ಮಲ್ಲಿಕಾರ್ಜುನಖರ್ಗೆ ಅವರೇ ಪ್ರಧಾನಿ ಅಭ್ಯರ್ಥಿಗೆ ಸೂಕ್ತ ಆಯ್ಕೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನಖರ್ಗೆ ಅವರ ಸಾಮರ್ಥ್ಯ, ಅರ್ಹತೆಯನ್ನು ಗಮನಿಸಿಯೇ ಪ್ರಧಾನಿ ಮೋದಿ ಅವರು ಖರ್ಗೆ ಅವರಿಗೆ ವಿದಾಯ ಹೇಳುವುದಾಗಿ ಹೇಳಿದ್ದಾರೆ. ಬಿಜೆಪಿ ಸಾಮರ್ಥ್ಯ ಇರುವ ನಾಯಕರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುತ್ತದೆ ಎಂದು ಅವರು ಟೀಕಿಸಿದ್ದಾರೆ.

ಮಲ್ಲಿಕಾರ್ಜುನಖರ್ಗೆ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಬಹುದು ಎಂಬ ಭಯದಿಂದಲೇ ಬಿಜೆಪಿ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಅವರನ್ನು ಸೋಲಿಸಲು ಸಂಚು ನಡೆಸುತ್ತಿದೆ ಎಂದು ದೂರಿದ್ದಾರೆ. ಮಳೆಯಿಂದ ನೆರೆ ಪರಿಸ್ಥಿತಿ ಉಂಟಾದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಅನುದಾನ ಬಿಡುಗಡೆಯಲ್ಲಿ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಾಳಿದೆ ಎಂದು ಅವರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ರಾಷ್ಟ್ರೀಯ ವಿಕೋಪ ನಿಧಿಯಿಂದ ರಾಜ್ಯಕ್ಕೆ 3 ಸಾವಿರ ಕೋಟಿ ರೂ.ಗಳ ಅನುದಾನ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೇಂದ್ರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆ ಸಂಬಂಧ ಸರ್ವಪಕ್ಷ ನಿಯೋಗವನ್ನು ಕೇಂದ್ರಕ್ಕೆ ಕೊಂಡೊಯ್ಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಲಹೆ ಮಾಡಿದ ರಾಯರೆಡ್ಡಿ, ಕೇಂದ್ರದಲ್ಲಿರುವ ರಾಜ್ಯದ ಸಚಿವರುಗಳು, ಲೋಕಸಭಾ ಸದಸ್ಯರುಗಳು ಹೆಚ್ಚಿನ ನೆರವು ಕೊಡಿಸಲು ಮುಂದಾಗಬೇಕು ಎಂದು ಹೇಳಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: