ಮೈಸೂರು

ಬಾಬು ಜಗಜೀವನ್ ರಾಮ್ ಪುತ್ಥಳಿ ಭಗ್ನಗೊಳಿಸಿದ ಕಿಡಿಗೇಡಿಗಳು

ಮೈಸೂರು,ಆ.30:- ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದಲ್ಲಿ ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ನಡೆದಿದೆ.

ಕಿಡಿಗೇಡಿಗಳ ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ಥಳಿಯ ತಲೆ ಭಾಗವನ್ನು ಸಂಪೂರ್ಣವಾಗಿ ಕಿಡಿಗೇಡಿಗಳು ಭಗ್ನಗೊಳಿಸಿದ್ದು, ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ರು ಆಗಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಪುತ್ಥಳಿ ಜೊತೆಗೆ ಸುತ್ತಲೂ ಹಾಕಲಾಗಿದ ಬ್ಯಾನರ್ ಕೂಡ ಹರಿದಿದ್ದಾರೆ. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: