
ಮೈಸೂರು
ಕನಕ ಜಯಂತ್ಯೋತ್ಸವ ಆಚರಣೆ
ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನಕ ಜಯಂತ್ಯೋತ್ಸವವನ್ನು ಆಚರಿಸಲಾಯಿತು.
ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ವತಿಯಿಂದ ನಡೆದ ಕನಕ ಜಯಂತ್ಯೋತ್ಸವದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಬೀರಿಹುಂಡಿ ಬಸವಣ್ಣ ಭಕ್ತ ಕನಕದಾಸರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು ಕನಕದಾಸರ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.
ಈ ಸಂದರ್ಭ ಗಾಂಧಿಭವನದ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ಸಹಪ್ರಾಧ್ಯಾಪಕ ಎನ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.