ಪ್ರಮುಖ ಸುದ್ದಿ

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಶಿಕ್ಷಕಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು

ರಾಜ್ಯ(ಬೆಂಗಳೂರು)ಆ.30:- ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ ಪಿ ನಗರದ ಶಾಕಾಂಬರಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.

ಶಾಕಾಂಬರಿ ನಗರದ ದೇವಿಕಾ(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯಾಗಿದ್ದು ಅವರು ಬನಶಂಕರಿಯಲ್ಲಿರುವ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಪತಿ  ಸುನೀಲ್ ಕುಮಾರ್ (38)ಕೂಡ ಅದೇ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಜೊತೆಯಲ್ಲಿ ಕೆಲಸ ಮಾಡುವ ವೇಳೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಈ ನಡುವೆ ಪತಿ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದರು. ಈ ಬಗ್ಗೆ ದೇವಿಕಾ ಪ್ರಶ್ನಿಸುತ್ತಿದ್ದು ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಜಗಳದಿಂದ ಬೇಸತ್ತ ದೇವಿಕಾ ರಾತ್ರಿ 12 ಗಂಟೆ ಸುಮಾರಿಗೆ ತನ್ನ ಸಾವಿಗೆ ಗಂಡನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೆಪಿ ನಗರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: