ಮೈಸೂರು

ಕೆ‌.ಎಂ.ಪಿ.ಕೆ. ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶೇಷ ರೀತಿಯಲ್ಲಿ ಮತದಾನ ಜಾಗೃತಿ

ಮೈಸೂರು,ಆ.30:- ಮೈಸೂರು ಮಹಾನಗರ ಪಾಲಿಕೆ ಚುನಾವಣೆ ‌ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ವಿಭಿನ್ನವಾಗಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಕೆ‌.ಎಂ.ಪಿ.ಕೆ. ಚಾರಿಟೇಬಲ್ ಟ್ರಸ್ಟ್ ಸಾರ್ವಜನಿಕರಿಗೆ ಫಲತಾಂಬೂಲ ನೀಡುವ ಮೂಲಕ ವಿಶೇಷ ಮತದಾನದ ಜಾಗೃತಿ ಮೂಡಿಸಿತು. ನಗರದ ನಟರಾಜ ಕಾಲೇಜು ಬಳಿ ಮನೆಮನೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಲಾಯಿತು. ಹಿರಿಯ ಸಮಾಜ ಸೇವಕ ರಘುರಾಂ ವಾಜಪೇಯಿ ಸೇರಿದಂತೆ ಹಲವರು ಪಾಲ್ಗೊಂಡು ಮತದಾನ ಮಾಡುವಂತೆ ಕರಪತ್ರ ನೀಡಿ ಜಾಗೃತಿ ಮೂಡಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: