ಸುದ್ದಿ ಸಂಕ್ಷಿಪ್ತ

ಚುನಾವಣೆ ಹಿನ್ನೆಲೆ : ಆ.30.31 ರಂದು ಮದ್ಯ ಮಾರಾಟ ನಿಷೇಧ

ಮಂಡ್ಯ (ಆ.30): ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯ ಸಂಬಂಧ ಮಂಡ್ಯ ನಗರಸಭೆ, ಮದ್ದೂರು, ಪಾಂಡವಪುರ, ನಾಗಮಂಗಲ ಪುರಸಭೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಗಡಿಯಿಂದ 3 ಕಿ.ಮೀ ಪರಿಧಿಯಲ್ಲಿ ಆಗಸ್ಟ್ 30 ರಂದು ಬೆಳಿಗ್ಗೆ 7 ಗಂಟೆಯಿಂದ ಆಗಸ್ಟ್ 31ರ ಸಂಜೆ 6 ಗಂಟೆಯ ವರೆಗೆ ಮತ್ತು ಮತ ಎಣಿಕೆ ದಿನವಾದ ಸೆಪ್ಟೆಂಬರ್ 3ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಮದ್ಯದಂಗಡಿಗಳನ್ನು, ಬಾರ್, ರೆಸ್ಟೋರೆಂಟ್ ಮತ್ತು ಕ್ಲಬ್‍ಗಳಲ್ಲಿ ಮದ್ಯ ಮಾರಾಟ, ಸಾಗಾಣಿಕೆ, ಶೇಖರಣೆಯನ್ನು ನಿಷೇಧಿಸಿ ಪಾನನಿರೋಧ ದಿವಸಗಳೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರು ಆದೇಶಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: