ಕರ್ನಾಟಕ

ಮತಗಟ್ಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಡ್ಯ ಡಿ.ಸಿ ಆದೇಶ

ಮಂಡ್ಯ (ಆ.30): ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮತದಾನದ ದಿನಾಂಕದಂದು ಮತದಾನ ಪ್ರಾರಂಭವಾಗುವ ಮುಂಚಿನ 48 ಗಂಟೆಗಳ ಒಳಗೆ ಬಹಿರಂಗ ಪ್ರಚಾರವನ್ನು ನಿಲ್ಲಿಸಲು ಆದೇಶಿಸಲಾಗಿದ್ದು, ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಪ್ರಕರಣ 32ರ ಪ್ರಕಾರ ಯಾವುದೇ ವ್ಯಕ್ತಿಯು ಮತದಾನ ನಡೆಯುವ ದಿನಾಂಕ ಅಥವಾ ದಿನಾಂಕಗಳಲ್ಲಿ ಆ ಮತದಾನ ಕೇಂದ್ರದೊಳಗೆ ಅಥವಾ ಮತದಾನ ಕೇಂದ್ರದಿಂದ 100 ಮೀಟರ್ ಒಳಗಿನ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಮತಗಳಿಗಾಗಿ ಪ್ರಚಾರ ಮಾಡಬಾರದು.

ಮತದಾರರನ್ನು ಮತ ಕೋರುವುದು, ನಿರ್ದಿಷ್ಟ ಅಭ್ಯರ್ಥಿಗೆ ಮತ ನೀಡದಿರುವಂತೆ, ಯಾವುದೇ ಮತದಾರರ ಮನ ಒಲಿಸುವುದು, ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸೂಚನೆ ಅಥವಾ ಚಿಹ್ನೆಯನ್ನು (ಸರ್ಕಾರಿ ನೋಟಿಸನ್ನು ಹೊರತುಪಡಿಸಿ) ಪ್ರದರ್ಶಿಸಬಾರದು.

ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಬೆಂಬಲಕ್ಕಾಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೊರಗಿನಿಂದ ಚುನಾವಣಾ ಪ್ರಚಾರಕ್ಕಾಗಿ ತಾರಾ ಪ್ರಚಾರಕರು ಮತ್ತು ಇತರೆ ವ್ಯಕ್ತಿಗಳನ್ನು ಕರೆಯಿಸಿಕೊಂಡಲ್ಲಿ ಅಂತಹ ವ್ಯಕ್ತಿಗಳು ಚುನಾವಣೆ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯನ್ನು ಕಡ್ಡಾಯವಾಗಿ ಬಿಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: