ಮೈಸೂರು

ರಾಷ್ಟ್ರೀಯ ಗ್ರಾಹಕರ ದಿನಾಚರಣೆ ‘ಡಿ24’

ಮೈಸೂರು ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಡಿ.24ರ ಶನಿವಾರ ಬೆಳಿಗ್ಗೆ 11 ಗಂಟೆಗೆ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು’ ಹಮ್ಮಿಕೊಂಡಿದೆ.

ನಗರದ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ ನೀಡುವರು. ಶಾಸಕ ವಾಸು ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಸಚಿವ ತನ್ವೀರ್ ಸೇಠ್, ಮಹಾಪೌರ ಎಂ.ಜೆ. ರವಿಕುಮಾರ್, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಸಂಸದರಾದ ಪ್ರತಾಪ್ ಸಿಂಹ, ಆರ್. ಧೃವನಾರಾಯಣ್, ಜಿ.ಪ. ಅಧ್ಯಕ್ಷೆ ನಯಿಮಾ ಸುಲ್ತಾನ, ನಜೀರ್ ಅಹಮದ್ ಹಾಗೂ ಶಾಸಕ ಸಿ.ಎಸ್. ಪುಟ್ಟರಾಜು ಉಪಸ್ಥಿತರಿರುವರು.

ವಸ್ತು ಪ್ರದರ್ಶನ: ಅಂದು ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ ಗ್ರಾಹಕರ ಹಕ್ಕು, ಕರ್ತವ್ಯ, ಶಿಕ್ಷಣ, ಜಾಗೃತಿ ಸೇವೆಗಳ ಕುರಿತು ಗ್ರಾಹಕ ಜಾಗೃತಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ.

Leave a Reply

comments

Related Articles

error: