ಮೈಸೂರು

ದಲಿತ ಸಂಘರ್ಷ ಸಮಿತಿಯ ರಾಜ್ಯಮಟ್ಟದ ಸಮಾವೇಶ ‘ಡಿ.25’ ಮುಖ್ಯಮಂತ್ರಿಗಳಿಂದ ಉದ್ಘಾಟನೆ

ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿರ್ವಾಣ ಅಂಗವಾಗಿ ದಲಿತ ಸಂಘರ್ಷ ಸಮಿತಿಯ ರಾಜ್ಯಮಟ್ಟದ ಸಮಾವೇಶವನ್ನು ಡಿ.24 ರ ಶನಿವಾರ ಮೈಸೂರು ವೈದ್ಯಕೀಯ ಕಾಲೇಜಿನ ಅಮೃತ ಮಹೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶಕ್ಕೆ ಚಾಲನೆ ನೀಡುವರು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಅಂಬೇಡ್ಕರ್ ಭಾವಚಿತ್ರವನ್ನು ಆನಾವರಣಗೊಳಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಆರ್. ಧ್ರುವನಾರಾಯಣ, ಶಾಸಕರಾ ಪಿ.ಎಂ. ನರೇಂದ್ರಸ್ವಾಮಿ, ಹುಣಸೂರು ಶಾಸಕ ಹೆಚ್.ಪಿ. ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನಾ, ಜಿಲ್ಲಾಧಿಕಾರಿ ರಂದೀಪ್, ಮೆಡಿಕಲ್ ಕಾಲೇಜಿನ ನಿರ್ದೇಶಕ ಮತ್ತು ಡೀನ್ ಡಾ. ಬಿ. ಕೃಷ್ಣಮೂರ್ತಿ, ರಂಗಾಯಣ ಮಾಜಿ ನಿರ್ದೇಶಕ ಹೆಚ್. ಜನಾರ್ಧನ್, ವಿಚಾರವಾದಿಗಳಾದದ ರುದ್ರಪ್ಪ ಹನಗವಾಡಿ, ಅಖಿಲ ವಿದ್ಯಾಸಂದ್ರ ಮುಂತಾದವರು ಭಾಗವಹಿಸುವರು.

Leave a Reply

comments

Related Articles

error: