
ಕರ್ನಾಟಕಪ್ರಮುಖ ಸುದ್ದಿ
ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಅತ್ಯುತ್ತಮ ರೈತ, ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ರಾಜ್ಯ ಮಟ್ಟದ ಪ್ರಶಸ್ತಿಗಳು:
1. ದಿವಂಗತ ಶ್ರೀ ಸಿ. ಭೈರೇಗೌಡ ರಾಜ್ಯ ಮಟ್ಟದ ರೈತ ಪ್ರಶಸ್ತಿ.
2. ಡಾ. ಎಂ.ಹೆಚ್. ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕ ರೈತ ಪ್ರಶಸ್ತಿ.
3. ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ.
4. ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ.
5. ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ.
ಜಿಲ್ಲಾ ಮಟ್ಟದ ಪ್ರಶಸ್ತಿಗಳು :
1. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ.
2. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ.
ತಾಲ್ಲೂಕು ಮಟ್ಟದ ಪ್ರಶಸ್ತಿಗಳು :
1. ತಾಲ್ಲೂಕು ಮಟ್ಟದ ಅತ್ಯುತಮ ಯುವ ರೈತ ಪ್ರಶಸ್ತಿ.
2. ತಾಲ್ಲೂಕು ಮಟ್ಟದ ಅತ್ಯುತಮ ಯುವ ರೈತ ಮಹಿಳೆ ಪ್ರಶಸ್ತಿ.
ಈ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು 15-18 ನವೆಂಬರ್ – 2018 ರಲ್ಲಿ ಆಯೋಜಿಸಲಿರುವ ಕೃಷಿಮೇಳ -2018 ರ ಸಂದರ್ಭದಲ್ಲಿ ನೀಡಲಾಗುತ್ತದೆ.
ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 12-10-2018. ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು – 560 024 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-23418883 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. (ಎನ್.ಬಿ)