ಮೈಸೂರು

ಯುವ ಪರಿವರ್ತಕರ ಪ್ರಾರಂಭಿಕ ತರಬೇತಿ: ಅರ್ಜಿ ಆಹ್ವಾನ      

ಮೈಸೂರು,ಆ.31 : ಜನ ಆರೋಗ್ಯ ಸಂಸ್ಥೆ, ಎಸಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಟಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭವೃದ್ಧಿ ಮತ್ತು ಅನುಷ್ಟಾನ ಯೋಜನೆ”ಯಡಿಯಲ್ಲಿ ಯುವ ಪರಿವರ್ತಕರ ಪ್ರಾರಂಭಿಕ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿಧ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ, ಹುಮ್ಮಸ್ಸು, ಉತ್ತಮ ಅಂತವ್ರ್ಯಕ್ತೀಯ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರುವ ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು ಆಸಕ್ತಿ ಹೊಂದಿರುವ, ಮೈಸೂರು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ, ಅನುಭವ-ಸಮುದಾಯದಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರುವ ಹಾಗೂ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ನಾಳೆ ದಿನಾಂಕ 1  ರಂದು ಬೆಳಿಗ್ಗೆ 11.00 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣಕ್ಕೆ ಹಾಜರಾಗಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ   ವಿಹಾರ ಕ್ರೀಡಾಂಗಣ, ನಜರ್‍ಬಾದ್, ಮೈಸೂರು ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 0821-2564179ರ ರ ಮೂಲಕ ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: