ಮೈಸೂರು

ಮೆಟ್ರಿಕ್‍ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಮೈಸೂರು,ಆ.31: ನಂಜನಗೂಡು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2018-19ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಹಾಗೂ ರಾಜ್ಯ ವಿದ್ಯಾರ್ಥಿವೇತನ ನೀಡಲು 1 ರಿಂದ 10 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ್‍ಪೂರ್ವ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರ ಅಧಿಸೂಚಿಸಿರುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಹಾಗೂ ಕೇಂದ್ರ ಸರ್ಕಾರವು ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳು (ಪ್ರವರ್ಗ-1, 2ಎ, 3ಎ, 3ಬಿ ಗಳಲ್ಲಿ ಬರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು) ಕೇಂದ್ರ ಪುರಸ್ಕೃತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವವರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಒಳಗಿರಬೇಕು. ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಪ್ರವರ್ಗ-1 ರ ವಿದ್ಯಾರ್ಥಿಗಳಿ ವಾರ್ಷಿಕ ಆದಾಯ ಮತಿ 1.00 ಲಕ್ಷ ರೂ. ಒಳಗಿರಬೇಕು.  ಪ್ರವರ್ಗ 2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗಗಳಿಗೆ 44,500/- ರೂ. ಒಳಗಿರಬೇಕು.
ಅರ್ಜಿಗಳನ್ನು ವೆಬ್‍ಸೈಟ್ ವಿಳಾಸ www.ssp.karnataka.gov.in ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ  ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ದೂರವಾಣಿ ಸಂಖ್ಯೆ 0821-2342917 ನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: