ಮೈಸೂರು

ಪರಿಶಿಷ್ಟ ಪಂಗಡ ಮೆಟ್ರಿಕ್‍ಪೂರ್ವ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ  

ಮೈಸೂರು,ಆ.31: ಮೈಸೂರು ಜಿಲ್ಲೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಡುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2018-19ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (1 ನೇ ತರಗತಿಯಿಂದ 8ನೇ ತರಗತಿ ಮತ್ತು 9ನೇ ತರಗತಿಯಿಂದ 10ನೇ ತರಗತಿ) ಮಂಜೂರಾತಿ ಸಂಬಂಧ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಸದರಿ ಯೋಜನೆಯಡಿ ವಿದ್ಯಾರ್ಥಿ ವೇತನ ಸೌಲಭ್ಯವನ್ನು ಪಡೆಯಲು http://ssp.karnataka.gov.in ಅಥವಾ www.tw.kar.nic.in  ಲಿಂಕ್‍ರಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 31 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
1ನೇ ತರಗತಿಯಿಂದ 8ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ  ರೂ.6.00 ಲಕ್ಷಗಳ ಮಿತಿಯೊಳಗೆ ಇರಬೇಕು. 9ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯಮಿತಿ ವಾರ್ಷಿಕ ರೂ.2.5 ಲಕ್ಷಗಳ ಮಿತಿಯೊಳಗೆ ಇರತಕ್ಕದ್ದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ಯೋಜನಾ ಸಮನ್ವಯಾಧಿಕಾರಿ, ಸಮಗ್ರಗಿರಿಜನ ಅಭಿವೃದ್ಧಿ ಯೋಜನೆ, ಮೈಸೂರು – 0821-2427170, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರು ತಾ.    – 0821-2543076, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹುಣಸೂರು ತಾ.    – 08222-252812, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹೆಚ್.ಡಿ.ಕೋಟೆ ತಾ-08228-255680, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಂಜನಗೂಡು ತಾ. ಪೋನ್.ನಂ -08221-297293, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಟಿ.ನರಸೀಪುರ ತಾ.-08227-260230, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೆ.ಆರ್.ನಗರ ತಾ. – 08223-264049    , ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಪಿರಿಯಾಪಟ್ಟಣ ತಾ. – 08223-273128 ನ್ನು ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: