ಮೈಸೂರು

ಮಾಜಿ ಮೇಯರ್ ಸಂದೇಶ್ ಸ್ವಾಮಿ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಜೆಡಿಎಸ್ ಕಾರ್ಯಕರ್ತರು

ಮೈಸೂರು,ಆ.31:-  ಪಾಲಿಕೆಯ ಮಾಜಿ ಮೇಯರ್ ಸಂದೇಶ್ ಸ್ವಾಮಿ ಅವರ ಮೇಲೆ ಜೆಡಿಎಸ್ ಕಾರ್ಯಕರ್ತರು ಮಾರಣಾಂತಿಕವಾಗಿ  ಹಲ್ಲೆ ನಡೆಸಿದ ಘಟನೆ  ವಾರ್ಡ್ ನಂಬರ್ 35 ರ ಕಲ್ಯಾಣಗಿರಿಯಲ್ಲಿ  ನಡೆದಿದೆ.

ಮಾಜಿ ಮೇಯರ್ ಸೇರಿದಂತೆ ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿದ್ದು, ಮಾಜಿ ಮೇಯರ್ ಮತ್ತು ಬಿಜೆಪಿ ಕಾರ್ಯಕರ್ತರು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತಗಟ್ಟೆ ಬಳಿ  ಘಟನೆ ನಡೆದಿದ್ದು, ಗುಂಪು ಚದುರಿಸಲು ಹೋದ ಸಂದೇಶಸ್ವಾಮಿಯವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಮಂಜುನಾಥ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಡಿಸಿಪಿ ಡಾ.ವಿಷ್ಣುವರ್ಧನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: