ಮೈಸೂರು

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿ : ಓರ್ವ ಸಾವು

ಮೈಸೂರು,ಸೆ.1:- ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು‌ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇತರ ಮೂವರು‌ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೊಪ್ಪನಹಳ್ಳಿ ಬಳಿ ತಡರಾತ್ರಿ ಸಂಭವಿಸಿದೆ.

ಮೃತರನ್ನು ಹೆಚ್.ಡಿ.ಕೋಟೆ ತಾಲೂಕಿನ ನಿಲುವಾಗಿಲು ಗ್ರಾಮದ ಜಗದೀಶ(29) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಹೆಚ್.ಡಿ.ಕೋಟೆಯಿಂದ ಮೈಸೂರಿಗೆ ಆಗಮಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.  ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: