ಪ್ರಮುಖ ಸುದ್ದಿ

ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರ ಸಂಖ್ಯೆ ಈಗ 1,878

ರಾಜ್ಯ( ಮಡಿಕೇರಿ) ಸೆ.1 :- ಜಿಲ್ಲೆಯಾದ್ಯಾಂತ ಭಾರೀ ಮಳೆಯಿಂದಾಗಿ ಹಲವು ಭಾಗಗಳಲ್ಲಿ ತೀವ್ರ ಭೂಕುಸಿತ ಉಂಟಾಗಿತ್ತು, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಹಲವು ಮಂದಿ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪುನರ್ವಸತಿ ಕಲ್ಪಿಸಲಾಗುತ್ತಿದೆ.

ಸಂತ್ರಸ್ತರಿಗೆ ವಿತರಿಸಲು ರಾಜ್ಯ, ಜಿಲ್ಲೆಯ ವಿವಿಧೆಡೆಗಳಿಂದ, ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದ, ಸಂಘ ಸಂಸ್ಥೆಗಳಿಂದ ಸ್ವೀಕೃತವಾಗುತ್ತಿರುವ ಪರಿಹಾರ ಸಾಮಾಗ್ರಿಗಳನ್ನು ಜಿಲ್ಲೆಯ ದಾಸ್ತಾನು ಕೇಂದ್ರಗಳಾದ ನಗರದ ಜಿಲ್ಲಾಡಳಿತ ಭವನ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಗೋದಾಮು, ಕುಶಾಲನಗರ ಮತ್ತು ಪೊನ್ನಂಪೇಟೆಯ ಹಳೇ ನ್ಯಾಯಾಲಯ ಕಟ್ಟಡ ಕೇಂದ್ರಗಳಲ್ಲಿ ದಾಸ್ತಾನು ಮಾಡಲು ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಗೆ ಆಹಾರ ಸಾಮಾಗ್ರಿಗಳು, ವೈದ್ಯಕೀಯ ಸಾಮಾಗ್ರಿಗಳು, ಕುಡಿಯುವ ನೀರು ಹಾಗೂ ಹಾಗೂ ಇತರೆ ಅಗತ್ಯ ಪರಿಹಾರ ಸಾಮಾಗ್ರಿಗಳು 07 ಭಾರಿ ಹಾಗೂ ಲಘು ವಾಹನಗಳಲ್ಲಿ ಆಗಸ್ಟ್ 31 ರಂದು ಜಿಲ್ಲೆಗೆ ಬಂದಿರುತ್ತದೆ. ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ನೆರೆ ಸಂತ್ರಸ್ಥರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯಾಧಿಕಾರಿಗಳ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಮುಖಾಂತರ ಹಂಚಿಕೆ ಮಾಡಲು 48 ಲಘು ವಾಹನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

16310 ಕೆ.ಜಿ. ಅಕ್ಕಿ, 1655 ಕೆ.ಜಿ. ಸಕ್ಕರೆ, 188 ಲೀಟರ್ ಎಣ್ಣೆ, 1733 ಕೆ.ಜಿ. ತೊಗರಿ ಬೆಳೆ, 160 ಬಾಕ್ಸ್ ಕುಡಿಯುವ ನೀರಿನ ಬಾಟಲಿ, 1033 ಬಾಕ್ಸ್ ಬಿಸ್ಕೆಟ್, 172 ಹೊದಿಕೆಗಳು, 126 ಉಡುಗೆ ವಸ್ತುಗಳನ್ನು ಜಿಲ್ಲಾಡಳಿತದ ವತಿಯಂದ ಸಂತ್ರಸ್ತರಿಗೆ ಆಗಸ್ಟ್ 31 ರವರೆಗೆ ವಿತರಣೆ ಮಾಡಲಾಗಿದೆ.

ಮಡಿಕೇರಿ ತಾಲೂಕಿನ 14 ಪರಿಹಾರ ಕೇಂದ್ರಗಳಲ್ಲಿ 523 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 680 ಪುರುಷ ಮತ್ತು 658 ಮಹಿಳೆ ಸೇರಿದಂತೆ 1338 ಜನ ಸಂತ್ರಸ್ತರಿದ್ದಾರೆ.

ಸೋಮವಾರಪೇಟೆ ತಾಲೂಕಿನ 04 ಪರಿಹಾರ ಕೇಂದ್ರಗಳಲ್ಲಿ 203 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 263 ಪುರುಷ ಮತ್ತು 277 ಮಹಿಳೆ ಸೇರಿದಂತೆ ಒಟ್ಟು 540 ಜನ ಸಂತ್ರಸ್ತರಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿರುವ 18 ಪರಿಹಾರ ಕೇಂದ್ರಗಳಲ್ಲಿ ಒಟ್ಟು 726 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 943 ಪುರುಷರು ಮತ್ತು 935 ಮಹಿಳೆಯರು ಸೇರಿದಂತೆ ಒಟ್ಟು 1,878 ಜನ ಸಂತ್ರಸ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.     (ಕೆಸಿಐ,ಎಸ್.ಎಚ್)

Leave a Reply

comments

Related Articles

error: