ಮೈಸೂರು

ದಸರಾದಲ್ಲಿ ಜನೋಪಯೋಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಜಿಲ್ಲಾಧಿಕಾರಿ ಅಭಿರಾಮ್ ಜಿ.ನೇತೃತ್ವದಲ್ಲಿ ಸಭೆ

ಮೈಸೂರು,ಸೆ.2:-  ಮೈಸೂರು ದಸರಾ ಮಹೋತ್ಸವ-2018ರ ಕಾರ್ಯಕ್ರಮವನ್ನು ಸರ್ಕಾರ ಅರ್ಥಪೂರ್ಣವಾಗಿ ಆಚರಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ, ಈ ಬಾರಿ ಹೊಸತನದಿಂದ ಕೂಡಿದ ಹಾಗೂ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಅರಮನೆ ಮಂಡಳಿಯ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ರೈತ ದಸರಾ, ಮಹಿಳಾ, ದಸರಾ, ಆಹಾರ ಮೇಳೆ, ಕವಿಗೋಷ್ಠಿ, ವಿದೇಶಿ ಪ್ರವಾಸಿಗರ ಆಕರ್ಷಣೆಯ ಕಾರ್ಯಕ್ರಮಗಳು ಸೇರಿದಂತೆ, ಕೆಲವು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲು ಬೇಕಾಗುವ ಅಗತ್ಯಗಳ ಬಗ್ಗೆ ಚರ್ಚಿಸಿದರು.

ಮತ್ಸ್ಯ ಪ್ರದರ್ಶನ, ಪ್ರೀತಿಯ ಪ್ರಾಣಿ-ಪಕ್ಷಿಗಳ ಪ್ರದರ್ಶನ (ಪೆಟ್ ಶೋ), ವಿವಿಧ ತಳಿಗಳ ಸಾಕು ಪ್ರಾಣಿಗಳ ಪ್ರದರ್ಶನ, ಕವಿ, ಕಿರುಚಿತ್ರ ತಯಾರಿಕೆ ಕುರಿತು ಕಾರ್ಯಾಗಾರ ಆಯೋಜಿಸುವುದು, ಚಲನಚಿತ್ರೋತ್ಸವದ ಸಂದರ್ಭದಲ್ಲಿ ಕೆಲವು ನಿರ್ದಿಷ್ಟ ವಿಷಯಗಳ ಬಗ್ಗೆ ಸಂವಾದ, ಅರಮನೆಯೊಳಗೆ ರಂಗೋಲಿ ಸ್ಪರ್ಧೆ ಮುಂತಾದ ವಿಷಯಗಳ ಕಾರ್ಯಸಾಧ್ಯತೆ ಬಗ್ಗೆ ಅವರು ಚರ್ಚಿಸಿದರು.

ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕ ಸೋಮಸುಂದರ್, ಪ್ರವಾಸೋದ್ಯಮ ಉಪ ನಿರ್ದೇಶಕ ಜನಾರ್ಧನ್, ಗ್ರಂಥಾಲಯ ಉಪ ನಿದೇರ್ಶಕ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಉಪ ನಿರ್ದೇಶಕಿ ರಾಧ, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಉಪ ನಿರ್ದೇಶಕ ಅಜಿತ್ ಕುಮಾರ್, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕಿ ಹಬೀಬ ನಿಶಾತ್, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಮಣ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್. ರಾಜು, ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: