ಪ್ರಮುಖ ಸುದ್ದಿ

ಬಿಬಿಎಂಪಿ ಮೇಯರ್ ಮೀಸಲಾತಿ ಸಂಬಂಧ ಪಕ್ಷದ ಶಾಸಕರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು : ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ರಾಜ್ಯ(ಬೆಂಗಳೂರು)ಸೆ.3:-  ಬಿಬಿಎಂಪಿ ಮೇಯರ್ ಮೀಸಲಾತಿ ಸಂಬಂಧ ಪಕ್ಷದ ಶಾಸಕರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಈ ಬಾರಿ ಮೇಯರ್ ಯಾವ ವರ್ಗಕ್ಕೆ ಮೀಸಲಿರಿಸಬೇಕು ಎನ್ನುವ ಬಗ್ಗೆ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಎಲ್ಲರೊಂದಿಗೆ ಚರ್ಚಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಈ ಸಂಬಂಧ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: