ಸುದ್ದಿ ಸಂಕ್ಷಿಪ್ತ

ಸೆ.5ರಂದು ಮೈವಿವಿಯಿಂದ ಶಿಕ್ಷಕರ ದಿನಾಚರಣೆ

ಮೈಸೂರು,ಸೆ.3 :  ಮೈಸೂರು ವಿವಿಯ ಡಾ.ಎಸ್.ರಾಧಾಕೃಷ್ಣನ್ ತತ್ವಶಾಸ್ತ್ರ ಮತ್ತು ಭಾರತೀಯ ಸಂಸ್ಕೃತಿ ಕೇಂದ್ರದ ವತಿಯಿಂದ ಮಾನಸಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.5ರ ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.

ಶ್ರೀರಾಮಕೃಷ್ಣ ವಿದ್ಯಾಶಾಲೆಯ ಮುಖ್ಯಸ್ಥ ಶ್ರೀಸ್ವಾಮಿ ಯುಕ್ತೇಶಾನಂದಜಿ ಮಹಾರಾಜ್ ಉದ್ಘಾಟಿಸುವರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ‍್ಯಾಪಕ ಡಾ.ಕೆ.ಎಸ್.ರವೀಂದ್ರನಾಥ್ ‘ಸಮಾಜದಲ್ಲಿ ಶಿಕ್ಷಕರ ಪಾತ್ರ ಮತ್ತು ಪ್ರಾಮುಖ್ಯತೆ’ ವಿಷಯವಾಗಿ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: