ಪ್ರಮುಖ ಸುದ್ದಿ

ಗಣೇಶೋತ್ಸವದಿಂದಲೇ ಪರಿಸರ ಮಾಲಿನ್ಯವಾಗುತ್ತಿದೆ ಎನ್ನುವಂತೆ ಬಿಂಬಿಸುತ್ತಿರುವ ಆದೇಶ ವಾಪಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ರಾಜ್ಯ(ಬೆಂಗಳೂರು)ಸೆ.4:- ನಗರದಲ್ಲಿ ನಡೆಯುವ ಗಣೇಶೋತ್ಸವದಿಂದಲೇ ಪರಿಸರ ಮಾಲಿನ್ಯವಾಗುತ್ತಿದೆ ಎನ್ನುವಂತೆ ಬಿಂಬಿಸುತ್ತಿರುವ ಆದೇಶಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಪಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಪದಾಧಿಕಾರಿಗಳು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಛೇರಿ ಎದುರು ಪ್ರತಿಭಟನಾ ಪ್ರದರ್ಶನ ನಡೆಸಿದರು.

ದೊಡ್ಡ ಹಾಗೂ ಸಣ್ಣ ಪ್ರಮಾಣದ ಗಣೇಶನ ಮೂರ್ತಿಗಳನ್ನು ಹೊತ್ತುಕೊಂಡು ಮಂಡಳಿ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಈ ಆದೇಶಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಆಪಾದಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ ಅವರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸಮಿತಿಯ ಅಧ್ಯಕ್ಷ ಈ. ಅಶ್ವತ್ಥ ನಾರಾಯಣ ಅವರು ಗಣೇಶನ ಎತ್ತರ ಇಷ್ಟೇ ಇರಬೇಕು, ಇಷ್ಟೇ ದಿನಗಳಲ್ಲಿ ನೀರಿಗೆ ಬಿಡಬೇಕು. ಇಲ್ಲವಾದಲ್ಲಿ ಗಣಪತಿ ವಿಗ್ರಹಗಳನ್ನು ವಶಪಡಿಸಿಕೊಂಡು ಜೈಲು ಶಿಕ್ಷೆ ದಂಡ ವಿಧಿಸಲಾಗುವುದು ಎಂಬ ಆದೇಶಗಳು ವಿಗ್ರಹ ಮಾಡುವ ಶಿಲ್ಪಿಗಳು ಮತ್ತು ಮಾರಾಟ ಮಾಡುವ ವ್ಯಾಪಾರಸ್ಥರಲ್ಲಿ ಆತಂಕ ಉಂಟುಮಾಡಿದೆ ಎಂದು ಆಪಾದಿಸಿದರು.

ಈಗಾಗಲೇ ಪೂನಾ, ಮುಂಬೈ ನಗರಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗಾಗಿ ಶಿಲ್ಪಿಗಳು ಮತ್ತು ವ್ಯಾಪಾರಸ್ಥರಿಂದ ವಶಪಡಿಸಿಕೊಂಡಿರುವ ಮೂರ್ತಿಗಳನ್ನು ವಾಪಾಸ್ ನೀಡಬೇಕು ಹಾಗೂ ದಂಡವನ್ನು ಹಿಂದಿರುಗಿಸಬೇಕು ಎಂದು ಒತ್ತಾಯಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: