
ಮೈಸೂರು
2017 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ
ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ನಗರದ ಪತ್ರಿಕಾಭವನದಲ್ಲಿ 2017 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ಸಮಿತಿಯ ಅಧ್ಯಕ್ಷರಾದ ನಾಗರಾಜು. ಜಿ ಮಾತನಾಡಿ, ಭೋವಿ ಜನಾಂಗಕ್ಕೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಭೋವಿ ಜನಾಂಗದವರು ಶೈಕ್ಷಣಿಕವಾಗಿ ತೀರಾ ಹಿಂದುಳಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. ಈ ಸಮುದಾಯಕ್ಕೆ ಸದಾಶಿವ ಆಯೋಗವನ್ನು ತಿರಸ್ಕರಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಈ ಸಂದರ್ಭ ಸಮಿತಿಯ ಪದಾಧಿಕಾರಿಗಳಾದ ರಾಮಕೃಷ್ಣಪ್ಪ, ಸೀತಾರಾಂ, ಪಿ.ಮಲ್ಲಯ್ಯ, ಸಿ.ದಾಸಣ್ಣ ಮತ್ತಿತರರು ಹಾಜರಿದ್ದರು.