ಸುದ್ದಿ ಸಂಕ್ಷಿಪ್ತ

ಶ್ರೇಷ್ಠ ಪುಸ್ತಕ ಪ್ರಶಸ್ತಿ : ಅರ್ಜಿ ಆಹ್ವಾನ

ಮೈಸೂರು,ಸೆ.4-ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ 2018-19ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಿದೆ.

ಪುಸ್ತಕಗಳ ಸಂಖ್ಯೆಗನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 2 ಪ್ರಶಸ್ತಿಗಳನ್ನು ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ 25 ಸಾವಿರ ರೂ.ಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವುದು.

ಜನವರಿ 2017 ರಿಂದ ಡಿಸೆಂಬರ್ 2018 ರೊಳಗೆ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ. ಲೇಖಕರು ನಿಗಧಿತ ನಮೂನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು 2019ರ ಜನವರಿ 5 ರೊಳಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಭವನ, 24/2, 21ನೇ ಮುಖ್ಯ ರಸ್ತೆ, ಬಿ.ಎಸ್.ಎನ್.ಎಲ್. ಕಚೇರಿ ಹತ್ತಿರ ಬನಶಂಕರಿ 2ನೇ ಹಂತ, ಬೆಂಗಳೂರು-560070 ಇಲ್ಲಿಗೆ ಸಲ್ಲಿಸುವುದು. ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ www.kstacademy.in ಗೆ ಭೇಟಿ ನೀಡಬಹುದು. (ಎಂ.ಎನ್)

 

 

Leave a Reply

comments

Related Articles

error: