ಮೈಸೂರು

ಡಿ. 25: ಸಂಸ್ಮರಣ ಸಮಾರಂಭ

ಕುಂದೂರು ಮಠದ ಡಾ. ಇಮ್ಮಡಿ ಶಿವಬಸವ ಸ್ವಾಮೀಜಿ ಅವರ ಸಂಸ್ಮರಣ ಸಮಾರಂಭವನ್ನು ಡಿ.25 ರಂದು ಬೆಳಿಗ್ಗೆ 10.30 ಕ್ಕೆ ಚಾಮುಂಡಿಬೆಟ್ಟದ ಪಾದ ರಸ್ತೆಯಲ್ಲಿರುವ ಶ್ರೀ ಕುಂದೂರು ಮಠದ ಗದ್ದಿಗೆಯಲ್ಲಿ ಏರ್ಪಡಿಸಲಾಗಿದೆ ಎಂದು ಮಠದ ಪ್ರೊ.ನಂಜುಂಡಯ್ಯ ಹೇಳಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು  ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ, ಕನಕಪುರ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ. ಇಮ್ಮಡಿ ಶಿವಬಸವ ಸ್ವಾಮಿ ಅವರ ‘ನುಡಿಸೊಡರು’ ಗ್ರಂಥವನ್ನು ಸಾಹಿತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ ಹಾಗೂ ಪ್ರೊ. ಎನ್.ಎಸ್. ತಾರಾನಾಥ್ ಸಂಸ್ಮರಣ ನುಡಿಗಳನ್ನಾಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಿವಮೂರ್ತಿ, ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.

Leave a Reply

comments

Related Articles

error: