
ಪ್ರಮುಖ ಸುದ್ದಿ
ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸಚಿವ ವೆಂಕಟರಾವ್ ನಾಡಗೌಡ ಸ್ಪಷ್ಟನೆ
ರಾಜ್ಯ(ಬೆಂಗಳೂರು)ಸೆ.5:- ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ, ಹಾಲಿನ ದರ ಏರಿಕೆಯ ಆಲೋಚನೆ ಕೂಡ ಇಲ್ಲ. ಈ ಬಗ್ಗೆ ಸರ್ಕಾರದಲ್ಲಿ ಯಾವುದೇ ರೀತಿಯ ಚರ್ಚೆ ಕೂಡ ಆಗಿಲ್ಲ ಎಂದು ತಿಳಿಸಿದರು.
ಮಳೆ ಇಲ್ಲದ ಪ್ರದೇಶಗಳಲ್ಲಿ ಮೋಡ ಬಿತ್ತನೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾವನೆ ಇದೆ. ಮಳೆ ಇಲ್ಲದ ಪ್ರದೇಶಗಳಲ್ಲಿ ಮೋಡ ಬಿತ್ತನೆ ಮಾಡುವ ಕುರಿತಾದ ಪ್ರಸ್ತಾವನೆ ಇದೆ. ಆದರೆ ಈ ಬಗ್ಗೆ ಏನು ಚರ್ಚೆ ಆಗಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಚರ್ಚೆ ಆಗಬಹುದು ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)