ಪ್ರಮುಖ ಸುದ್ದಿ

ವಕ್ಫ್ ಆಸ್ತಿ ಕಬಳಿಕೆಯ ವರದಿ ಸಲ್ಲಿಸಿದ ಬಳಿಕ ನನಗೆ ಜೀವ ಬೆದರಿಕೆ ಇದೆ : ಅನ್ವರ್ ಮಾಣಿಪ್ಪಾಡಿ ಆತಂಕ

ರಾಜ್ಯ(ಬೆಂಗಳೂರು)ಸೆ.5:-  ವಕ್ಫ್ ಆಸ್ತಿ ಕಬಳಿಕೆಯ ವರದಿ ಸಲ್ಲಿಸಿದ ಬಳಿಕ ನನಗೆ ಜೀವ ಬೆದರಿಕೆ ಇದೆ ಎಂದು ಅಲ್ಪ ಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ  ಮಾತನಾಡಿದ ಅನ್ವರ್ ಮಾಣಿಪ್ಪಾಡಿ,  ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಭದ್ರತೆಯನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ವಾಪಸ್ ಪಡೆದಿದೆ.  ವಿಪಕ್ಷ ನಾಯಕರು ಈ ಬಗ್ಗೆ ಸರಕಾರಕ್ಕೆ ಹಲವು ಬಾರಿ ಪತ್ರ ಬರೆದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು. ಈ  ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದರೂ ಯಾವುದೇ ಸೂಕ್ತ ಸ್ಪಂದನೆ ಸಿಕ್ಕಿಲ್ಲ.  ನನಗೆ ಜೀವ ಬೆದರಿಕೆ ಇದ್ದರೂ, ಕಬಳಿಕೆಯಾಗಿರುವ ವಕ್ಫ್ ಆಸ್ತಿಯನ್ನು ಸರಕಾರ ಹಿಂದಕ್ಕೆ ಪಡೆಯುವ ತನಕ ಹೋರಾಟ ನಿಲ್ಲಿಸಲ್ಲ ಎಂದು ಮಾಣಿಪ್ಪಾಡಿ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: