ಕರ್ನಾಟಕಪ್ರಮುಖ ಸುದ್ದಿ

ಮನಸ್ಸಿಲ್ಲದಿದ್ದರೂ ಜೆಡಿಎಸ್ ಜೊತೆಗಿನ ಮೈತ್ರಿ ಅನಿವಾರ್ಯ: ದಿನೇಶ್ ಗುಂಡೂರಾವ್!

ಬೆಂಗಳೂರು (ಸೆ.5): ಲೋಕಸಭೆ ಚುನಾವಣೆಗೂ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ಮುಂದಾಗಿವೆ. ಈ ನಡುವೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಮನಸ್ಸಿಲ್ಲದಿದ್ದರೂ ಮೈತ್ರಿ ಅನಿವಾರ್ಯ ಎಂದು ಹೇಳಿದ್ದಾರೆ.

ಜೆಡಿಎಸ್ ಜೊತೆ ಸೇರಿ ಲೋಕಸಭೆ ಚುನಾವಣೆ ಎದುರಿಸಲು ಮನಸ್ಸಿಲ್ಲ. ಏನೇ ಇದ್ದರೂ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಈ ಮೈತ್ರಿ ಅನಿವಾರ್ಯ. ಅದಕ್ಕಾಗಿ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿಕೊಂಡಿದ್ದಾರೆ.

ಜೆಡಿಎಸ್ ಜತೆ ಸೇರಿದರೆ ರಾಜ್ಯದಲ್ಲಿ ಎರಡೂ ಪಕ್ಷಗಳು ಸೇರಿಕೊಂಡು 20 ರಿಂದ 25 ಸ್ಥಾನ ಗೆಲ್ಲಬಹುದು. ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾದರೆ ಈ ಮೈತ್ರಿ ಅನಿವಾರ್ಯ ಎಂದು ಗುಂಡೂರಾವ್ ಅವರು ಹೇಳಿದ್ದಾರೆ.(ಎನ್.ಬಿ)

Leave a Reply

comments

Related Articles

error: