ಸುದ್ದಿ ಸಂಕ್ಷಿಪ್ತ
ಸೆ.8ರಂದು ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ವಾರ್ಷಿಕ ಸಭೆ
ಮೈಸೂರು,ಸೆ.5 : ಚಾಮರಾಜನಗರ -ಮೈಸೂರು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ 18ನೇ ವಾರ್ಷಿಕ ಸಭೆಯನ್ನು ಸೆ.8ರ ಬೆಳಗ್ಗೆ 10 ಗಂಟೆಗೆ ಲಲಿತ ಮಹಲ್ ರಸ್ತೆಯಲ್ಲಿರುವ ಪೊಲೀಸ್ ಭವನದಲ್ಲಿ ಏರ್ಪಡಿಸಲಾಗಿದೆ.
ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ಶರತ್ ಚಂದ್ರ ಉದ್ಘಾಟಿಸಲಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರ ರಾವ್, ಚಾಮರಾಜನಗರ ಜಿಲ್ಲೆ ಪೊಲೀಸ್ ಅಧೀಕ್ಷಕ ಧರ್ಮೇಂದ್ರ ಕುಮಾರ್ ಮೀನಾ ಹಾಗೂ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಪತ್ರಿಕಾ ಕಾರ್ಯದರ್ಶಿ ಜೆ.ಚಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)