ಮೈಸೂರು

ಕನ್ನಡದ ಹಿರಿಯ ನಟ ಚೇತನ್ ರಾಮ್ ರಾವ್ ಇನ್ನಿಲ್ಲ

ಕನ್ನಡದ ಖ್ಯಾತ ಹಿರಿಯ ನಟ ಚೇತನ್ ರಾಮ್ ರಾವ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ.

ಮೈಸೂರಿನ ತೊಣಚಿಕೊಪ್ಪಲು ನಿವಾಸಿಯಾಗಿರುವ ಚೇತನ್ ರಾಮ್ ರಾವ್ ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮೂವರು ಪುತ್ರಿಯರು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ಹೆಸರಾಂತ ನಟರೊಂದಿಗೆ ನಟಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಇವರು ಎಂ.ಆರ್.ವಿಠ್ಠಲ್, ದೊರೆ-ಭಗವಾನ್ ಸೇರಿದಂತೆ ಹಿರಿಯ ಖ್ಯಾತ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ. ಸುಮಾರು 350 ಚಿತ್ರಗಳಲ್ಲಿ ನಟಿಸಿರುವ ಚೇತನ್ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

Leave a Reply

comments

Related Articles

error: