ಮೈಸೂರು

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಮೈಸೂರು,ಸೆ.6:- ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಮನೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ  ಕಂಪಲಾಪುರದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಚಲಿಸುತ್ತಿದ್ದ ಕಾರೊಂದು ಕಂಪಲಾಪುರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಮನೆಯೊಳಗೆ ನುಗ್ಗಿದ್ದು, ಮನೆಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇನೋವಾ ಕಾರಿನ ಮುಂಭಾಗ ಕೂಡ ಸಂಪೂರ್ಣ ಜಖಗೊಂಡಿದೆ. ಕಾರಿನಲ್ಲಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನೋವಾ ಕಾರು ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: