ಸುದ್ದಿ ಸಂಕ್ಷಿಪ್ತ

ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ತರಬೇತಿ: ಅರ್ಜಿ ಆಹ್ವಾನ

ಮೈಸೂರು,ಸೆ.6- ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಕೌಶಲ ಅಭಿವೃದ್ದಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

8ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಫುಡ್ ಪ್ರೊಡಕ್ಷನ್ ಹಾಗೂ ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ, 12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಫ್ರೆಂಟ್ ಆಫೀಸ್ ತರಬೇತಿ ನೀಡಲಾಗುವುದು.

ತರಬೇತಿ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ  ನೀಡಲಾಗುವುದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ ಫುಡ್ ಕ್ರಾಫ್ಟ್ ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ,  ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು-570010. ದೂ.ಸಂ. 0821-2445388, 2974388, 6362018821 ಅನ್ನು ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: