ಕರ್ನಾಟಕ

ಏಕಲವ್ಯ ಮತ್ತು ಜೀವಮಾನ ಸಾಧನೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹಾಸನ (ಸೆ.6): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017 ಹಾಗೂ ಅದರ ಹಿಂದಿನ 4 ವರ್ಷಗಳಲ್ಲಿ ಅಂಗೀಕೃತ 38 ಕ್ರೀಡೆಗಳಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಅರ್ಹತೆಯುಳ್ಳ ಪುರುಷ/ ಮಹಿಳಾ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಲು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ/ ತರಬೇತುದಾರರಾಗಿ ಜೀವಮಾನ ಸಾಧನೆ ಮಾಡಿದಂತಹ ಹಿರಿಯ ಕ್ರೀಡಾಪಟು/ತರಬೇತುದಾರರಿಗೆ ಜೀವಮಾನ ಸಾಧನಾ ಪ್ರಶಸ್ತಿ ನೀಡಲು ಅರ್ಹ ಪ್ರಸ್ತಾವನೆಗಳನ್ನು ಕರೆಯಲಾಗಿದೆ.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಸನ (ದೂರವಾಣಿ 246056) ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 18-09-2018 ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಕಾಶ್ ಎಂ.ಸರಶೆಟ್ಟಿ ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: