ಮೈಸೂರುಸುದ್ದಿ ಸಂಕ್ಷಿಪ್ತ

ಕೆ.ಪಿ.ಎಸ್.ಸಿ ದ್ವಿತೀಯ ದರ್ಜೆ ಸಹಾಯಕ ಹುದ್ದೆ ಪರೀಕ್ಷೆಗೆ ತರಬೇತಿ

ಕರ್ನಾಟಕ ಲೋಕಸೇವಾ ಆಯೋಗವು ಸರ್ಕಾರದ ವಿವಿಧ ಇಲಾಖೆಗಳಿಗೆ ಬೇಕಾಗುವ 442 ಪ್ರಥಮ ದರ್ಜೆ ಸಹಾಯಕರು ಹಾಗೂ 381 ದ್ವಿತೀಯ ದರ್ಜೆ ಸಹಾಯಕರುಗಳ ಆಯ್ಕೆಗಾಗಿ ನಡೆವಯುವ ಸ್ಪರ್ಧಾತ್ಮಕ ಪರೀಕ್ಷೆಗಾಗಿ 2017ರ ಜನವರಿ 4 ರ ಒಳಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸಂಬಂಧ ಕೃಷಿಕ್ ಸರ್ವೋದಯ ಫೌಂಡೇಷನ್‍ ವತಿಯಿಂದ ತರಬೇತಿಯನ್ನು ಆಯೋಜಿಸಲಾಗಿದ್ದು, ಡಿಸೆಂಬರ್ 26ರ ಸೋಮವಾರದಿಂದ ಮೈಸೂರಿನ ವಿಜಯನಗರ 2ನೇ ಹಂತ, ಜನರಲ್ ಕೆ.ಎಸ್. ತಿಮ್ಮಯ್ಯ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಷನ್‍ನ “ಕೃಷಿಕ್ ಭವನ”ದಲ್ಲಿ ನಡೆಯಲಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 24 ರ ಒಳಗಾಗಿ ನೋಂದಾಯಿಸಿಕೊಳ್ಳಬೇಕೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕಾರ್ಯಕ್ರಮದ ಸಂಯೋಜಕರಾದ ಡಾ. ಜಿ. ಗೋವಿಂದರಾಜು ಅವರನ್ನು ಸಂಪರ್ಕಿಸಬಹುದು; ದೂರವಾಣಿ ಸಂಖ್ಯೆ 0821-2301564/ 9945752592/ 9611605678 ಅನ್ನು ಸಂರ್ಪರ್ಕಿಸಬಹುದು. ಈ ಮೇಲ್ : [email protected]. ವಸತಿ ವ್ಯವಸ್ಥೆಯ ಅಗತ್ಯವಿದ್ದವರಿಗೆ ಹಾಸ್ಟೆಲ್ ಸೌಲಭ್ಯವೂ ಇದೆ.

Leave a Reply

comments

Related Articles

error: