ಮೈಸೂರು

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಟ್ಟೆ ಅಂಗಡಿ

ಮೈಸೂರು,ಸೆ.7:-  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಅಗ್ನಿ ಅನಾಹುತ ಸಂಭವಿಸಿ ಬಟ್ಟೆ ಅಂಗಡಿಯೊಂದು ಧಗ ಧಗನೆ ಹೊತ್ತಿ ಉರಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದಲ್ಲಿ ನಡೆದಿದೆ.

ಬೆಟ್ಟದಪುರದಲ್ಲಿದ್ದ ರಾಜಸ್ಥಾನ ಮೂಲದ ರಮೇಶ್ ಎಂಬವರಿಗೆ ಸೇರಿದ ‘ನಾಕೋಡ’ ಎಂಬ ಬಟ್ಟೆ ಅಂಗಡಿಯಲ್ಲಿ ಬೆಳಗಿನ ಜಾವ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಗೆ ತೀವ್ರವಾಗಿ ಮಳಿಗೆಯೆಲ್ಲ ವ್ಯಾಪಿಸಿದ್ದು, ಸುಮಾರು 20 ಲಕ್ಷ ರೂ. ಮೌಲ್ಯದ ಬಟ್ಟೆ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಸಾಥ್ ನೀಡಿದ್ದು, ಸತತ ಒಂದು ಗಂಟೆ ಕಾಲ ಬೆಂಕಿ ಹೊತ್ತಿ ಉರಿದಿದೆ. ಬೆಂಕಿ‌ನಂದಿಸಲು ಸಿಬ್ಬಂದಿಗಳು  ಹರಸಾಹಸ ಪಟ್ಟಿದ್ದು, ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: