ಮೈಸೂರು

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಕೈಗೆ ಸಿಕ್ಕಿ ಬಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ

ಮೈಸೂರು,ಸೆ.7:- ಗ್ರಾಮ ಪಂಚಾಯತ್ ಕಾರ್ಯದರ್ಶಿಯೋರ್ವರು ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಸಿದ್ದಲಿಂಗಪುರ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮಾರಪ್ಪ ಎಂಬವರೇ ಎಸಿಬಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದವರಾಗಿದ್ದಾರೆ. ಬಾಕಿ ಉಳಿದಿರುವ ಕೆಲಸ ಮಾಡಿಕೊಡಲು ಬೆಲವತ್ತ ಗ್ರಾಮದ ಶೀಲಾವತಿ ಅವರ  ಬಳಿ ಮಾರಪ್ಪ 12 ಸಾವಿರ ಲಂಚಕ್ಕೆ ಬೇಡಿಕೆ  ಇಟ್ಟಿದ್ದರು. ಈ ಕುರಿತು ಶೀಲಾವತಿ ಎಸಿಬಿಗೆ ದೂರು ನೀಡಿದ್ದರು. ಈ ಸಂಬಂಧ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮಾರಪ್ಪ ಶೀಲಾವತಿ ಅವರ ಬಳಿ 12 ಸಾವಿರ ಹಣವನ್ನು ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಹಾಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರೋಪಿ ಮಾರಪ್ಪನನ್ನು ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ 07/18 u/s 7 PC ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: