ಕರ್ನಾಟಕಪ್ರಮುಖ ಸುದ್ದಿ

ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ : ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಲು ಡಿ.ಸಿ ಸೂಚನೆ

ಮಂಡ್ಯ (ಸೆ.7): ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಪ್ರಯುಕ್ತ ಗೌರಿ ಹಾಗೂ ಗಣೇಶನ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸದರಿ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ವಾದಂತಹ ವಿಗ್ರಹಗಳನ್ನು ಜಲಗಳಲ್ಲಿ, ನದಿ, ಕಾಲುವೆ,ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಪಿಒಪಿ ಮತ್ತು ಬಣ್ಣದ ವಿಗ್ರಹಗಳನ್ನು ತಯಾರಿಸಬಾರದು ಹಾಗೂ ಜಲಮೂಲಗಳಲ್ಲಿ ವಿಗ್ರಹಗಳನ್ನು ವಿಸರ್ಜಿಸಬಾರದು. ಅಲ್ಲದೇ ಉಲ್ಲಂಘನೆ ಮಾಡುವವರಿಗೆ ಐಪಿಸಿ 1860 ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

ಗೌರಿಗಣೇಶ ಹಬ್ಬದ ಸಂಧರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ನಗರಸಭೆ, ಪುರಸಭೆವತಿಯಿಂದ ಗೌರಿಗಣೇಶ ಮೂರ್ತಿಗಳ ವಿಸರ್ಜನೆಗೆ ನಿಗಧಿಪಡಿಸಿರುವ ಸ್ಥಳಗಳಲ್ಲಿಯೇ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೆ ಮೂರ್ತಿಗಳನ್ನು ವಿಸರ್ಜಿಸಬೇಕು. ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂಧರ್ಭದಲ್ಲಿ ಹಸಿ ಕಸ ಪ್ರತ್ಯೇಕಿಸಿ ನಗರಸಭೆ, ಪುರಸಭೆಯ ಕಸ ಸಂಗ್ರಹಣಾ ವಾಹನಕ್ಕೆ ನೀಡಬೇಕು. ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.(ಎನ್.ಬಿ)

Leave a Reply

comments

Related Articles

error: