ಕರ್ನಾಟಕಪ್ರಮುಖ ಸುದ್ದಿ

ವಕ್ಫ್ ಆಸ್ತಿ ಕಬಳಿಕೆ: ಮಾನ್ಪಾಡಿ ವರದಿ ಜಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು (ಸೆ.7): ರಾಜ್ಯದ ವಕ್ಫ್ ಮಂಡಳಿ ಆಸ್ತಿಗಳನ್ನು ಕಬಳಿಕೆ ಮಾಡಿರುವ ಕುರಿತು ಅನ್ವರ್ ಮಾನ್ಪಾಡಿ ಅವರು ನೀಡಿರುವ ವರದಿ ಜಾರಿಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಗುರುವಾರ, ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಮಾನ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಾಸಕರಾದ ಸಿಎಂ ಉದಾಸಿ, ಸಿ.ಟಿ. ರವಿ, ಸುರೇಶ್ ಕುಮಾರ್, ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಪ್ರಾಣೇಶ್, ವೈ.ಎ. ನಾರಾಯಣ ಸ್ವಾಮಿ, ತೇಜಸ್ವಿನಿ ರಮೇಶ್, ಕೆ.ಪಿ. ನಂಜುಂಡಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. (ಎನ್.ಬಿ)

Leave a Reply

comments

Related Articles

error: