ಕ್ರೀಡೆ

ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಹನುಮ ವಿಹಾರಿ

ಓವಲ್,ಸೆ.7-ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಆಟಗಾರ ಹನುಮ ವಿಹಾರಿ ಪಾದಾರ್ಪಣೆ ಮಾಡಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಆಂಧ್ರ ಪ್ರದೇಶವನ್ನು ಪ್ರತನಿಧಿಸುತ್ತಿರುವ ವಿಹಾರಿ ಅವರಿಗೆ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ಯಾಪ್ ನೀಡಿದ್ದಾರೆ.

ಈ ಮೊದಲು ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗಾಗಿ ಹನುಮ ವಿಹಾರಿ ಬುಲಾವ್ ಪಡೆದಿದ್ದರು. ಇದೀಗ ಹಾರ್ದಿಕ್ ಪಾಂಡ್ಯ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ 292ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2012ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಅಂಡರ್ 19 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರೂ ಕೂಡಾ ಆಗಿದ್ದಾರೆ.  ಬಲಗೈ ಬ್ಯಾಟ್ಸ್‌ಮನ್ ಆಗಿರುವ ವಿಹಾರಿ ಆಫ್ ಸ್ಪಿನ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹಾಗೆಯೇ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದರು.

ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ವಿಜೇತ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ತರಲಾಗಿಲ್ಲ. (ಎಂ.ಎನ್)

Leave a Reply

comments

Related Articles

error: