ಮೈಸೂರು

ಬಂಜೆತನಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಸಾವು

ಬಂಜೆತನಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಹದೇವಪುರದ ನಿವಾಸಿ ಪುಷ್ಪಾ(33) ಮೃತಪಟ್ಟ ಮಹಿಳೆ.

ಪುಷ್ಪಾ ಮೇಡೇವ್ ಪ್ರಣಾಳ ಶಿಶು ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದು, ಶನಿವಾರದಂದು ಮೃತಪಟ್ಟಿದ್ದಾರೆ. ಅವರು ಕಳೆದೆರಡು ವರ್ಷಗಳಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಗಳ ಸಾವಿಗೆ ಆಸ್ಪತ್ರೆಯ ವೈದ್ಯರೇ ಕಾರಣ ಎಂದು ಮೃತಳ ಪೋಷಕರು ದೂರಿದ್ದಾರೆ. ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: