ಮೈಸೂರು

ತ್ರಿಚಕ್ರ ವಾಹನ ವಿತರಣೆ

ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ಶನಿವಾರ ವಿಕಲಚೇತನರಿಗೆ ಅನುಕೂಲವಾಗುವಂತೆ ಯಂತ್ರಚಾಲಿತ ತ್ರಿಚಕ್ರವಾಹನಗಳನ್ನು ವಿತರಿಸಲಾಯಿತು.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಗೋ.ಮಧುಸೂದನ್, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಪ್ರಯುಕ್ತ ವಿಕಲಚೇತನರಿಗೆ ತ್ರಿಚಕ್ರವಾಹನ ವಿತರಿಸಿದರು.

ಮೈಸೂರು ನಗರ ಸೇರಿದಂತೆ ಮೈಸೂರು ಜಿಲ್ಲೆಯಲ್ಲಿ ಒಟ್ಟು 48, ಚಾಮರಾಜನಗರ ಜಿಲ್ಲೆ ಒಟ್ಟು 20, ಮಂಡ್ಯ ಜಿಲ್ಲೆಯಲ್ಲಿ 10, ಹಾಸನ ಜಿಲ್ಲೆಗೆ 10 ಹೀಗೆ ಒಟ್ಟು 88 ವಾಹನಗಳನ್ನು ಈಗಾಗಲೇ ವಿತರಿಸಲಾಗಿದ್ದು, ಶನಿವಾರ 36 ವಾಹನಗಳನ್ನು ವಿತರಿಸಲಾಯಿತು.

ಈ ಸಂದರ್ಭ ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂಜುಂಡ ಸ್ವಾಮಿ, ತೋಂಟದಾರ್ಯ, ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: