ಕರ್ನಾಟಕ

ಆಕ್ಷೇಪಣೆಗಳಿಗೆ ಆಹ್ವಾನ

ಮಂಡ್ಯ (ಸೆ.8): ಮಂಡ್ಯ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪ ಸಂಖ್ಯಾತ ವರ್ಗದ ಅರ್ಹ ನಿರುದ್ಯೋಗಿ ವಿದ್ಯಾವಂತ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಪ್ರವಾಸಿ ಟ್ಯಾಕ್ಸಿ ವಿತರಣೆ ಕಾರ್ಯಕ್ರಮಗಳ 2016-17ನೇ ಸಾಲಿನ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮಂಡ್ಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಛೇರಿಯಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಬಗ್ಗೆ ಯಾವುದೇ ಸಾರ್ವಜನಿಕ ಆಕ್ಷೇಪಣೆಗಳಿದ್ದಲ್ಲಿ, ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಮಂಡ್ಯ ಇವರಿಗೆ ಸೆಪ್ಟೆಂಬರ್ 15 ರೊಳಗೆ ಸಲ್ಲಿಸಬಹುದು.(ಎನ್.ಬಿ)

Leave a Reply

comments

Related Articles

error: