ಪ್ರಮುಖ ಸುದ್ದಿ

ಇನ್ಮುಂದೆ ಸರ್ಕಾರಿ ಸಭೆ ,ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರು ಬಳಸುವಂತಿಲ್ಲ

ರಾಜ್ಯ(ಬೆಂಗಳೂರು)ಸೆ.8:- ಇನ್ಮುಂದೆ ಸರ್ಕಾರಿ ಸಭೆ ,ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರು  ಬಳಸುವಂತಿಲ್ಲ. ಸರ್ಕಾರಿ ಸಭೆ ,ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದಿಂದ ಆಯೋಜಿಸಲ್ಪಡುವ  ಸಭೆ ಸಮಾರಂಭಗಳಲ್ಲಿ ಹಾಗೂ ಸರ್ಕಾರಿ ಕಛೇರಿಗಳಲ್ಲಿ  ಪ್ಲಾಸ್ಟಿಕ್ ವಾಟರ್ ಬಾಟಲಿ ಗಳನ್ನ ಬಳಸುವಂತಿಲ್ಲ. ಪ್ಲಾಸ್ಟಿಕ್ ಗಳು ಪರಿಸರ ಮಾಲಿನ್ಯ ಉಂಟು ಮಾಡುವ ಜತೆಗೆ  ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ  ಹಿನ್ನೆಲೆಯಲ್ಲಿ  ಪ್ಲಾಸ್ಟಿಕ್ ಬಾಟಲಿ ನೀರು ಪೂರೈಕೆಯನ್ನು ಸರ್ಕಾರ ನಿಷೇಧಿಸಿದೆ. ಸರ್ಕಾರಿ ಮತ್ತು ಸ್ವಾಮ್ಯದ  ನಿಗಮ ಮಂಡಳಿಗಳು , ವಿಶ್ವವಿದ್ಯಾಲಯಗಳು ಮತ್ತು ಸರ್ಕಾರದಿಂದ ಅನುದಾನ ಪಡೆಯುವ ಯಾವುದೇ ಸಂಸ್ಥೆಗಳಿಂದ ಏರ್ಪಾಡು ಮಾಡುವ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್  ಬಾಟಲಿ ನೀರನ್ನು ನಿಷೇಧಿಸಲಾಗಿದೆ. ಸರ್ಕಾರದಿಂದ ಅಂಗೀಕರಿಸಲ್ಪಟ್ಟ  ಆರ್.ಓ ವ್ಯವಸ್ಥೆಯನ್ನು ಅಳವಡಿಸುವಂತೆಯೂ  ಸಲಹೆ ನೀಡಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: