ಪ್ರಮುಖ ಸುದ್ದಿ

ಇಡಿ ಸೇರಿದಂತೆ ಇನ್ನಿತರ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ : ಸಂಸದ ಡಿ.ಕೆ ಸುರೇಶ್ ಗಂಭೀರ ಆರೋಪ

ರಾಜ್ಯ(ಬೆಂಗಳೂರು)ಸೆ.8:- ಸಚಿವ ಡಿ ಕೆ ಶಿವಕುಮಾರ್ ಅವರನ್ನು ಹೇಗಾದರೂ ಮಾಡಿ ಬಂಧಿಸುವುದಕ್ಕೆ ಬಿಜೆಪಿ ಷಡ್ಯಂತ್ರ ಮಾಡುತ್ತಿದೆ.  ಇಡಿ ಸೇರಿದಂತೆ ಇನ್ನಿತರ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ  ಮಾಡಿಕೊಳ್ಳುತ್ತಿದೆ ಎಂದು ಸಂಸದ ಡಿ.ಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ  ಸಂಸದ ಡಿ.ಕೆ ಸುರೇಶ್,  ಬಿಎಸ್ ಯಡಿಯೂರಪ್ಪ ಐಟಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. 2017 ಜನವರಿಯಂದು ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಈ ಸಹೋದರರ ವಿರುದ್ಧ ಭ್ರಷ್ಟಾಚಾರ ಆರೋಪವಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಮತ್ತು ದಾಖಲೆಗಳಿವೆ. ಕರ್ನಾಟಕದ ಜನರ ಒಳಿತಿಗಾಗಿ ಈ ಪತ್ರವನ್ನು ಬರೆಯುತ್ತಿದ್ದೇನೆ  ಎಂದು ಹೇಳಿ ಬಿಎಸ್ ವೈ ಪತ್ರ ಬರೆದಿದ್ದಾರೆ ಎಂದು ಆರೋಪಿಸಿ ಬಿಎಸ್ ವೈ ಬರೆದಿದ್ದ ಪತ್ರವನ್ನು ಬಿಡುಗಡೆ ಮಾಡಿದರು. ನಮ್ಮ ನಿವಾಸದ ಮೇಲೆ ಐಟಿ ಮತ್ತು ಇಡಿ ದಾಳಿ ನಡೆಸಿಲ್ಲ. ಆದರೆ ನಮ್ಮ ಮೇಲೆ ಐಟಿಯಲ್ಲಿ ನಾಲ್ಕು ಕೇಸ್ ಗಳಿವೆ. ನಮ್ಮ ನಿವಾಸದ ಮೇಲೆ ಐಟಿ ದಾಳಿ ಎಂದು ಬಿಜೆಪಿ ವದಂತಿ ಹಬ್ಬಿಸುತ್ತಿದೆ. ಕೇಂದ್ರದ ಎಲ್ಲಾ ತನಿಖಾ ಸಂಸ್ಥೆಗಳನ್ನು  ಕೇಂದ್ರ ಸರ್ಕಾರದ  ದುರ್ಬಳಕೆ ಮಾಡಿಕೊಂಡು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಯಾರು ಪ್ರಧಾನಿ ಮೋದಿ ವಿರುದ್ಧ ಮಾತನಾಡುತ್ತಾರೋ, ಯಾರು ಪ್ರಬಲರಿದ್ದಾರೋ ಅಂತಹವರ ವಿರುದ್ಧ ಅವುಗಳನ್ನು ಇಡಿ ಮತ್ತು ಐಟಿ ಇಲಾಖೆ ದುರ್ಬಳಕೆ ಮಾಡಿಕೊಂಡು ಕುಗ್ಗಿಸುವ ಕೆಲಸ ಮಾಡುತ್ತಿದೆ ಎಂದು ಸಂಸದ ಡಿಕೆ ಸುರೇಶ್ ಕಿಡಿ ಕಾರಿದರು,

ಸಿಬಿಐ, ಇಡಿ. ಐಟಿ ಬಿಜೆಪಿ ಮೋರ್ಚಾವಾಗಿ ಮಾರ್ಪಾಡಿಗಿವೆ

ಸಿಬಿಐ, ಇಡಿ. ಐಟಿ ಬಿಜೆಪಿ ಮೋರ್ಚಾವಾಗಿ ಮಾರ್ಪಾಡಾಗಿವೆ.  ಅವುಗಳು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತನೆ ಮಾಡುತ್ತಿದೆ.  ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಬಿಜೆಪಿ ಟಾರ್ಗೆಟ್ ಮಾಡುತ್ತಿದೆ. ಅದೇ ರೀತಿ ಕರ್ನಾಟಕವನ್ನು ಅದು ಟಾರ್ಗೆಟ್  ಮಾಡುತ್ತಿದೆ.ತನಿಖಾ ಸಂಸ್ಥೆಗಳ ಮೇಲೆ ಬಿಜೆಪಿ ಒತ್ತಡ ಹಾಕಿ ನಮ್ಮ ಮೇಲೆ ಕೇಸ್ ಹಾಕುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಗಮನ ಸೆಳೆಯಲು ಯತ್ನಿಸುತ್ತೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಯನ್ನೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಮೋದಿ ಅವರಿಗೆ ಗೊತ್ತಿದೆಯೋ ಇಲ್ಲವೋ, ಈ ಬಗ್ಗೆ ಅವರು ಗಮನ ಹರಿಸುವ ಅಗತ್ಯವಿದೆ ಎಂದು ಸಂಸದ ಡಿ.ಕೆ ಸುರೇಶ್ ಟಾಂಗ್ ನೀಡಿದರು.

ಇನ್ನು ಕೆಲ ಶಾಸಕರುಗಳಿಗೆ ಬಿಜೆಪಿಯಿಂದ ಹಣದ ಆಮಿಷ ಒಡ್ಡಲಾಗುತ್ತಿದೆ. ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಅಪರೇಷನ್ ಕಮಲ ಮಾಡಲು ಹೊರಟಿದ್ದಾರೆ. ದೋಸ್ತಿ ಸರ್ಕಾರವನ್ನು ಬೀಳಿಸುವ ಯತ್ನಕ್ಕೆ ಮುಂದಾಗಿದೆ ಎಂದು ಆರೋಪಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: