ಕರ್ನಾಟಕಪ್ರಮುಖ ಸುದ್ದಿ

ಸಚಿವ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ಅವರಿಗೆ ಬಂಧನದ ಭೀತಿ?

ಬೆಂಗಳೂರು (ಸೆ.8): ರಾಜ್ಯದ ಜಲಸಂಪನ್ಮೂಲ ಸಚಿವ ಹಾಗೂ ಕಾಂಗ್ರೆಸ್‍ ಪಕ್ಷದ ಪ್ರಭಾವಿ ಮುಖಂಡರಾಗಿರುವ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಜಾರಿ ನಿರ್ದೆಶನಾಲಯ ಎಫ್‍ಐಆರ್ ದಾಖಲಿಸಲು ಸಿದ್ಧತೆ ನಡೆಸುತ್ತಿದೆ ಎನ್ನುವ ವದಂತಿ ಹಬ್ಬಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯವು ರಾಜ್ಯಪಾಲರ ಬಳಿ ಅನುಮತಿ ಕೋರಿದೆ ಎನ್ನಲಾಗಿದೆ.

ದೆಹಲಿಯ ಅವರ ಫ್ಲ್ಯಾಟ್​ನಲ್ಲಿ ಅಕ್ರಮ ಹಣ ಸಿಕ್ಕದ್ದ ಬಗ್ಗೆ ಸುದ್ದಿಯಾಗಿತ್ತು. ಈ ಎರಡು ಪ್ರಕರಣಗಳ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಲಾಯವು ಎಫ್​ಐಆರ್​ ದಾಖಲಿಸಿದೆ. ಡಿ.ಕೆ.ಶಿ. ಸಹೋದರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ಕೋರಿ ಜಾರಿ ನಿರ್ದೇಶನಾಲವು ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ ಎಂದು ತಿಳಿದು ಬಂದಿದ್ದು, ರಾಜ್ಯಪಾಲರು ಅನುಮತಿ ನೀಡಿದ್ದೇ ಆದಲ್ಲಿ ಡಿಕೆಶಿ ಸೋದರರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. (ಎನ್.ಬಿ)

Leave a Reply

comments

Related Articles

error: