ಸುದ್ದಿ ಸಂಕ್ಷಿಪ್ತ

ಸಾಧಕರ ಸನ್ಮಾನ ನಾಳೆ

ಮೈಸೂರು,ಸೆ.8 : ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಕಾರ್ಯಕ್ರಮವನ್ನು ನಾಳೆ (9)ರ ಸಂಜೆ 5 ಗಂಟೆಗೆ ಜೆಎಲ್ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಹಿಮಾಲಯ ಫೌಂಡೇಶನ್ ವತಿಯಿಂದ ಏರ್ಪಡಿಸಲಾಗಿದೆ.

ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಉದ್ಘಾಟಿಸುವರು, ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ ಅಧ್ಯಕ್ಷತೆ. ಕರ್ನಾಟಕ ಪೊಲೀಸ್ ಅಕಾಡೆಮಿ ಪ್ರಾಂಶುಪಾಲೆ ಡಾ.ಧರಣಿದೇವಿ ಮಾಲಗತ್ತಿ, ದಾಸ್ತಿ ಪ್ಯಾರಮೆಡಿಕಲ್ ಸಂಸ್ಥಾಪಕ ಡಾ.ಡಿ.ತಿಮ್ಮಯ್ಯ, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್, ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: