ಕರ್ನಾಟಕಪ್ರಮುಖ ಸುದ್ದಿ

ರಾಜಸ್ಥಾನದಲ್ಲಿ ಪೆಟ್ರೋಲ್-ಡಿಸೇಲ್ ಮೇಲಿನ ತೆರಿಗೆ ಇಳಿಕೆ

ಬೆಂಗಳೂರು (ಸೆ.10): ಪೆಟ್ರೋಲಿಯಂ ದರ ಏರಿಕೆ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಬಂದ್ ಆಚರಿಸುತ್ತಿವೆ. ಇದೇ ಹೊತ್ತಿನಲ್ಲಿ ರಾಜಸ್ಥಾನ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಇಳಿಸಿ ಮಹತ್ವದ ಹೆಜ್ಜೆ ಇಟ್ಟಿದೆ.

ರಾಜಸ್ಥಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಶೇ.4ರಷ್ಟು ಕಡಿತಗೊಳಿಸಲಾಗಿದೆ. ಇದರಿಂದ ಪ್ರತಿ ಲೀಟರ್ ಮೇಲೆ 2.50 ರೂ. ಇಳಿಕೆಯಾಗಲಿದೆ. ಈ ತೀರ್ಮಾನದಿಂದ ಆ ಸರ್ಕಾರದ ಆದಾಯದ ಮೇಲೆ 2 ಸಾವಿರ ಕೋಟಿ ರೂ. ಹೊರೆ ಬೀಳಲಿದೆ ಎಂದು ವರದಿಯಾಗಿದೆ. (ಎನ್.ಬಿ)

Leave a Reply

comments

Related Articles

error: