ಮೈಸೂರು

ಸೆ.11-12 : ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ‘ಛಾಯಾಚಿತ್ರ ಪ್ರದರ್ಶನ’

ಮೈಸೂರು,ಸೆ.10:- ಮೈಸೂರು ನಗರ ಪತ್ರಿಕಾ ಛಾಯಾಗ್ರಾಹಕರ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಕಲಾಮಂದಿರ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ಸೆ.11-12ರಂದು ಛಾಯಾಚಿತ್ರ ಪ್ರದರ್ಶನ 2018ನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನೆರವೇರಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಉದ್ಯಮಿ ಪಿ.ವಿ.ಗಿರಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ನ ಬ್ಯೂರೋ ಚೀಪ್ ಕೆ.ಶಿವಕುಮಾರ್ ಅಧ್ಯಕ್ಷತೆವಹಿಸಲಿದ್ದು, ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ವಿಶ್ವನಾಥ್ ಸುವರ್ಣ ಹಾಗೂ ಪ್ರಗತಿ ಗೋಪಾಲಕೃಷ್ಣ ಅವರಿಗೆ ಟಿ.ಎಸ್.ಸತ್ಯನ್ ಅವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲಾಗುವುದು. (ಎಸ್.ಎಚ್)

Leave a Reply

comments

Related Articles

error: